ಲೋನ್ ಕಂತುಗಳನ್ನು ಕಟ್ಟುವಂತೆ ನಿಮ್ಮನ್ನು ಪೀಡಿಸುತ್ತಿದ್ದಾರಾ..? ➤ ನಿಮಗೆ ಕರೆಮಾಡಿ ಒತ್ತಡ ಹೇರಿದರೆ ಇವರಿಗೆ ದೂರು ನೀಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27. ಕೊರೋನಾ ನಿಯಂತ್ರಿಸುವ ಸಲುವಾಗಿ ರಾಜ್ಯಾದ್ಯಂತ ಲಾಕ್‍ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ನೀಡಿದ್ದಾರೆ.

 

ಲಾಕ್‍ಡೌನ್ ಕಾರಣದಿಂದಾಗಿ ಜನಸಾಮಾನ್ಯರು ಕೆಲಸ ಇಲ್ಲದೆ ಮನೆಯಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಪಡೆದಿರುವ ಸಾಲದ ಕಂತು ಮರು ಪಾವತಿಸಲು ಕಷ್ಟ ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಾಲ ನೀಡಿರುವ ಹಣಕಾಸು ಸಂಸ್ಥೆಗಳು, ಫೈನಾನ್ಸ್ ಗಳು, ಮೈಕ್ರೋ ಫೈನಾನ್ಸ್ ಗಳು ಸಾಲದ ಕಂತು ಪಾವತಿಸುವಂತೆ ಒತ್ತಾಯಿಸಬಾರದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಇದರ ಹೊರತಾಗಿಯೂ ಯಾವುದೇ ಸಾಲ ನೀಡಿರುವ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ಮರು ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ಅಂತಹ ಸಂದರ್ಭದಲ್ಲಿ ಆ ಸಂಸ್ಥೆಗಳ ವಿರುದ್ಧ ದೂರು ನೀಡಲು ನೋಡಲ್ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ.

Also Read  ಈ ರಾಶಿಯವರನ್ನು ನೀವು ಮದುವೆಯಾದರೆ ನಿಮ್ಮ ಜೀವನದಲ್ಲಿ ಯಾವುದೇ ಕಾರಣಕ್ಕೂ ಸಮಸ್ಯೆ ಬರುವುದಿಲ್ಲ

ಮೈಕ್ರೋ ಫೈನಾನ್ಸ್ ಗಳು ಹಾಗೂ ಸಹಕಾರಿ ಸಂಸ್ಥೆಗಳು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಲ್ಲಿ ಅಂತಹ ಸಂದರ್ಭದಲ್ಲಿ ಸಹಕಾರಿ ಸಂಘಗಳ ಉಪ ನಿಬಂಧಕರಾದ ಪ್ರವೀಣ್ ನಾಯಕ್ – 944863338 ಇವರಿಗೆ ದೂರು ನೀಡುವಂತೆ ತಿಳಿಸಲಾಗಿದೆ. ಇನ್ನುಳಿದಂತೆ ಇತರೆ ಸಂಸ್ಥೆಗಳಿಗೆ ಸಂಬಂಧಿಸಿದ ದೂರುಗಳಾದಲ್ಲಿ, ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಪ್ರವೀಣ್ – 9449860916 ಇವರನ್ನು ಸಂಪರ್ಕಿಸಬಹುದಾಗಿದೆ.

 

 

Also Read  14ರ ವಯೋಮಿತಿಯ ಬಾಲಕಿಯರ ಯೋಗಾಸನ ಸ್ಪರ್ಧೆ - ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಸಾನ್ವಿ ಜಿಲ್ಲಾಮಟ್ಟಕ್ಕೆ ಆಯ್ಕೆ

 

error: Content is protected !!
Scroll to Top