(ನ್ಯೂಸ್ ಕಡಬ) newskadaba.com ಕಡಬ, ಮೇ.29. ಕಡಬ ತಾಲೂಕಿನಲ್ಲಿ ಕೊರೋನಾ ಎರಡನೇ ಅಲೆಗೆ ಎಂಟನೇ ಬಲಿಯಾಗಿದ್ದು, ಕುಟ್ರುಪ್ಪಾಡಿ ಗ್ರಾಮದ ಮಹಿಳೆಯೊಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಟ್ರುಪ್ಪಾಡಿ ಗ್ರಾಮದ ಆಚಾರ್ ಪಾಲ್ ನಿವಾಸಿ 63 ವರ್ಷದ ಮಹಿಳೆ ಕೊರೋನಾ ಸೋಂಕಿನಿಂದ ಶನಿವಾರದಂದು ಮೃತಪಟ್ಟಿದ್ದಾರೆ.
ಮೃತರ ಅಂತ್ಯಸಂಸ್ಕಾರ ಕೋವಿಡ್ ನಿಯಮದಂತೆ ಪದವು ಚರ್ಚಿನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
Also Read ಉದನೆ ಪುತ್ಯ ಭಾಗದಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ ➤ 'ಆಪರೇಷನ್ ಎಲಿಫೆಂಟ್' ರೆಂಜಿಲಾಡಿಯಿಂದ ಉದನೆಗೆ ಶಿಫ್ಟ್