ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು



(ನ್ಯೂಸ್ ಕಡಬ) newskadaba,ಉಡುಪಿ ಜೂ.02:ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 31 ರಂದು ಕಿಡಿಗೇಡಿಗಳು ‘DC Udupi’ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಪ್ರೊಫೈಲಿಗೆ ಜಿಲ್ಲಾಧಿಕಾರಿಗಳ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ.







 

 

ಈ ಕುರಿತು ಕಿಡಿಗೇಡಿಗಳ ವಿರುದ್ದ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66(c), 66(d) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.






 

 

error: Content is protected !!
Scroll to Top