ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​ ಎಂದ ಸಿಎಂ..!



(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಕರ್ನಾಟಕದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ಮುಂದುವರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಅಲ್ಲದೆ, ಲಾಕ್​ಡೌನ್​ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ.







 

ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ ಚರ್ಚೆ ನಡೆಸಲಿದ್ದೇನೆ. ಅಲ್ಲಿ ಅವರ ಸಲಹೆಗಳನ್ನು ಪಡೆದು ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಸದ್ಯಕ್ಕೆ ಕೊರೋನಾ ನಿಯಂತ್ರಿಸುವುದು ಮಾತ್ರ ನಮ್ಮ ಸರ್ಕಾರದ ಮುಂದಿರುವ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.






error: Content is protected !!
Scroll to Top