ಕಡಬದ ಪತ್ರಕರ್ತರಿಗೆ ನೆರವಾದ ಪತ್ರಕರ್ತರ ಸಂಘ ➤ ದಾನಿಗಳ ನೆರವಿನಿಂದ ಅಕ್ಕಿ, ದಿನಸಿ ಸಾಮಾಗ್ರಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.03. ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ಸದಸ್ಯರಿಗೆ ಜಿಲ್ಲಾ ಸಂಘದಿಂದ ಹಾಗೂ ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ದಾನಿಗಳ ನೆರವಿನಿಂದ ಕೊಡಮಾಡಿದ ದಿನಸಿ ಸಾಮಾಗ್ರಿಗಳ ಕಿಟ್ ನ್ನು ಗುರುವಾರದಂದು ಕಡಬ ಪ್ರೆಸ್ ಕ್ಲಬ್ ನಲ್ಲಿ ವಿತರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಎಲ್ಲಾ ಸದಸ್ಯರಿಗೆ ಕೊಡಮಾಡಿದ ತಲಾ 20 ಕೆಜಿ ಅಕ್ಕಿ ಹಾಗೂ ಅದರ ಜೊತೆಗೆ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ದಿನಸಿ ಸಾಮಾಗ್ರಿಗಳ ಕಿಟ್ ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ.ಕಾರ್ಯದರ್ಶಿ ವಿಜಯ ಕುಮಾರ್ ಕಡಬ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

 

 

 

Scroll to Top