BREAKING: ರಾಜ್ಯದಲ್ಲಿ ಮತ್ತೆ ಏಳು ದಿನಗಳ ಕಾಲ ಲಾಕ್‍ಡೌನ್ ಮುಂದುವರಿಕೆ ➤ ಜೂ.14 ರ ವರೆಗೆ ಲಾಕ್‍ಡೌನ್ ಘೋಷಿಸಿದ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.03. ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.

ಗುರುವಾರದಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಜೂ.7ರವರೆಗೆ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಕೊರೋನ ಪ್ರಕರಣ ಇಳಿಮುಖವಾದರೂ ವೈರಾಣು ಹರಡುವ ಸರಪಳಿ ಮುಂದುವರಿದಿದ್ದು, ಮತ್ತೆ ಒಂದು ವಾರಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದೆ. ಹೀಗಾಗಿ ಜೂ.14ರ ಬೆಳಗ್ಗೆ 6 ಗಂಟೆ ವರೆಗೆ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್ ಇರಲಿದೆ ಎಂದವರು ತಿಳಿಸಿದ್ದಾರೆ.

Also Read  ಪಿಎಸ್‌ಐ ನೇಮಕಾತಿ ಹಗರಣ, ವಿಚಾರಣೆಗೆ ಹೈಕೋರ್ಟ್ ತಡೆ..!

 

 

 

error: Content is protected !!
Scroll to Top