ಕೊರೋನಾ ಸೋಂಕಿಗೆ ಕಡಬ ತಾಲೂಕಿನ ಮತ್ತೋರ್ವರು ಬಲಿ ➤ 89 ವರ್ಷದ ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ) newskadaba.com ಕಡಬ, ಜೂ.05. ಕೊರೋನಾ ಎರಡನೇ ಅಲೆಗೆ ಕಡಬ ತಾಲೂಕಿನಲ್ಲಿ ವ್ಯಕ್ತಿಯೋರ್ವರು ಬಲಿಯಾಗಿದ್ದು, ಈ ಮೂಲಕ ಕಡಬ ತಾಲೂಕಿನಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.





ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ಬಡಿಲ ನಿವಾಸಿ 89 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಳೆದ ಮೂರು ವಾರಗಳ ಹಿಂದೆ ಇವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಬಂದಿದ್ದರು. ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ವೇಳೆ ಅವರಿಗೆ ಮತ್ತೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರದಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.






 

 

 

error: Content is protected !!
Scroll to Top