(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕಪ್ಪು ಶಿಲೀಂಧ್ರದ ಔಷಧಿಯ ಕೊರತೆ ಈಗ ಇಲ್ಲ. 15 ದಿನಗಳ ಹಿಂದೆ ಇದ್ದ ಕೊರತೆ ಈಗ ಇಲ್ಲ. ಕೇಂದ್ರದಿಂದ ದೊಡ್ಡ ಪ್ರಮಾಣದಲ್ಲಿ ಔಷಧಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಚಿಕಿತ್ಸೆಗಳನ್ನು ಉಚಿತಗೊಳಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ನಿರ್ದಿಷ್ಟ ದರ ನಿಗದಿಪಡಿಸಬೇಕಿದೆ. ಬೇಕಾದ ಹಾಗೆ ಹೆಚ್ಚು ಹಣ ಪಡೆಯುವಂತಿಲ್ಲ. ಇದಕ್ಕಾಗಿ ದರ ನಿಗದಿಪಡಿಸಲಾಗುವುದು. ಚಿಕಿತ್ಸಾ ವೆಚ್ಚಕ್ಕೆ ಇಷ್ಟೇ ಪಡೆಯಬೇಕು ಎಂದು ನಿಗದಿ ಮಾಡಲಾಗುವುದು ಎಂದರು.