ಕನ್ನಡದ ಹಿರಿಯ ನಟಿ ಸುರೇಖಾ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06: ವರನಟ ಡಾ. ರಾಜ್‌ಕುಮಾರ್ ಜತೆ “ತ್ರಿಮೂರ್ತಿ”ಯಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾದರು.

 

160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುರೇಖಾ ಬೆಂಗಳೂರು ನಗರದಲ್ಲಿ ನಿಧನರಾದರು. ಮಣ್ಣಿನ ಮಕ್ಕಳು, ಸಂಭ್ರಮ, ಕಿಂಗ್, ಶಂಕರ್ ಸುಂದರ್, ಆಲೆಮನೆ, ಬಿಳಿಗಿರಿಯ ಬನದಲ್ಲಿ ಚಿತ್ರಗಳಲ್ಲಿ ರಾಜ್‌ಕುಮಾರ್ ಜತೆ ನಟಿಸಿದ್ದಾರೆ.ಬನಶಂಕರಿ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Also Read  ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ ➤ 65 ವರ್ಷದ ವೃದ್ದನ ವಿರುದ್ಧ ಪ್ರಕರಣ ದಾಖಲು

 

error: Content is protected !!