(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.07. ಮಾಜಿ ಸಚಿವ, ಲೇಖಕ, ಪ್ರೊ. ಮಮ್ತಾಝ್ ಅಲಿ ಖಾನ್(94) ಅವರು ಸೋಮವಾರದಂದು ನಿಧನರಾಗಿದ್ದಾರೆ.
2008ರಲ್ಲಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಇವರು ಇಂದು ಬೆಂಗಳೂರಿನ ಗಂಗಾನಗರ ನಿವಾಸದಲ್ಲಿ ತಮ್ಮ ವಯೋಸಹಜ ಖಾಯಿಲೆಯಿಂದ ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.