(ನ್ಯೂಸ್ ಕಡಬ) newskadaba.com ಕಡಬ, ಜೂ.07. ಕೊರೋನಾ ಎರಡನೇ ಅಲೆಯು ಗ್ರಾಮೀಣ ಭಾಗದಲ್ಲಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಮರ್ಧಾಳ ಬದ್ರಿಯಾ ಜುಮಾ ಮಸೀದಿಯಲ್ಲಿ ಐಸೋಲೇಷನ್ ಸೆಂಟರ್ ತೆರೆಯಲು ಅನುಮತಿ ನೀಡುವಂತೆ ಐತ್ತೂರು ಗ್ರಾಮ ಪಂಚಾಯತ್ ಗೆ ಮನವಿ ನೀಡಲಾಯಿತು.
ಯಾವುದೇ ರೋಗ ಲಕ್ಷಣಗಳಿಲ್ಲದ ಕೊರೋನಾ ಸೋಂಕಿತರಿಗೆ ಹೋಂ ಐಸೋಲೇಷನ್ ಮಾಡುವಂತೆ ವೈದ್ಯರು ಸೂಚನೆ ನೀಡುತ್ತಿದ್ದು, ಗ್ರಾಮೀಣ ಭಾಗದ ಕೆಲವರಿಗೆ ತಮ್ಮ ಮನೆಗಳಲ್ಲಿ ಅಂತಹ ಸೌಲಭ್ಯಗಳಿರುವುದಿಲ್ಲ. ಅಂತಹ ಸಾರ್ವಜನಿಕರಿಗೆ ತಂಗಲು ಅವಕಾಶ ನೀಡಿ ಕೊರೋನಾ ಹಬ್ಬುವುದನ್ನು ತಡೆಗಟ್ಟುವ ಸಲುವಾಗಿ ಮಸೀದಿಯ ಮದರಸ ಕಟ್ಟಡದಲ್ಲಿ ಗರಿಷ್ಠ 10 ಬೆಡ್ ಗಳನ್ನು ಒಳಗೊಂಡ ಐಸೋಲೇಷನ್ ಸೆಂಟರ್ ಆರಂಭಿಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜುಮಾ ಮಸೀದಿಯ ಆಡಳಿತ ಮಂಡಳಿಯ ಸದಸ್ಯರಾದ ಹಮೀದ್ ಬದ್ರಿಯಾ, ಬೆಳ್ತಂಗಡಿ ಮನ್ಶರ್ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಹೈದರ್ ಮರ್ಧಾಳ, ಐತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಯೂಸುಫ್ ಎಂ.ಪಿ. ಉಪಸ್ಥಿತರಿದ್ದರು.