ನೆಲ್ಯಾಡಿ: ಕಾರು – ಗ್ಯಾಸ್‌ ಟ್ಯಾಂಕರ್ ನಡುವೆ ಢಿಕ್ಕಿ ➤ ಚಾಲಕ ಅಪಾಯದಿಂದ ಪಾರು*

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.13. ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಭಾನುವಾರದಂದು ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಮಾರುತಿ ಸುಝುಕಿ ಎರ್ಟಿಗಾ ಕಾರು ನಡುವೆ ಎಂಜಿರ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Also Read  ವಾಹನಗಳ ಬಹಿರಂಗ ಹರಾಜು

 

 

 

error: Content is protected !!