ಅಪಘಾತದಿಂದಾಗಿ ಗಂಭೀರಾವಸ್ಥೆಯಲ್ಲಿದ್ದ ನಟ ಸಂಚಾರಿ ವಿಜಯ್ ಇನ್ನಿಲ್ಲ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜೂ. 14. ಸ್ಯಾಂಡಲ್ ವುಡ್ ಯುವ ನಟ ಸಂಚಾರಿ ವಿಜಯ್ ಬೈಕ್ ಅಪಘಾತದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಕಳೆದ ಶನಿವಾರ ತಡರಾತ್ರಿ ತನ್ನ ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ್ದ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ನೇಹಿತ ನವೀನ್ ಎಂಬವರ ಬೆನ್ನು ಮೂಳೆಗೆ ತೀವ್ರ ಗಾಯವಾಗಿದ್ದರೆ, ಸಂಚಾರಿ ವಿಜಯ್ ಅವರ ತಲೆ ಹಾಗೂ ತೊಡೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದರು.

error: Content is protected !!

Join the Group

Join WhatsApp Group