ಸ್ವಂತ ಚಿಕ್ಕಪ್ಪನಿಂದಲೇ ಕಾಲೇಜು ವಿದ್ಯಾರ್ಥಿನಿಯ ನಿರಂತರ ಅತ್ಯಾಚಾರ ➤ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.14. ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯ ದೂರಿನ ಮೇರೆಗೆ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಸಾಲ್ಯಾನ್ ಎಂಬಾತ ಆತನ ಪತ್ನಿಯ ಅಕ್ಕ‌ನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಳೆದ ಒಂದು ವರ್ಷದಿಂದ ಯುವತಿಯು ಬಿ.ಸಿ.ರೋಡಿನ ಸಂಬಂಧಿಕರ ಮನೆಯಿಂದ ಕಾಲೇಜು ಹೋಗುತ್ತಿದ್ದು, ಅಲ್ಲೇ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದ. ಅವಾಗಿಂದಲೇ ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದು, ಪ್ರಸ್ತುತ ಈತನ ಟಾರ್ಚರ್ ತಡೆಯಲಾಗದೆ ಮನೆಯವರಿಗೆ ತಿಳಿಸಿ ಠಾಣೆಗೆ ದೂರು ನೀಡಿದ್ದಾಳೆ.

Also Read  ಕರಾವಳಿಯಲ್ಲಿ ಭಾರೀ ಮಳೆ- ಧರೆಗುರುಳಿದ 10 ವಿದ್ಯುತ್ ಕಂಬಗಳು

 

 

 

error: Content is protected !!
Scroll to Top