ಅಕ್ಷತಾ ಪಾಂಡವಪುರಗೆ “ನ್ಯೂಯಾರ್ಕ್ ಇಂಡಿಯನ್ ಫಿಲ್ಮ್” ಪ್ರಶಸ್ತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಸ್ಯಾಂಡಲ್‍ವುಡ್ ನಟಿ, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಅವರಿಗೆ ಪ್ರತಿಷ್ಠಿತ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ (ಎನ್‍ವೈಐಎಫ್‍ಎಫ್)ನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.ಪಿಂಕಿ ಎಲ್ಲಿ? ಚಿತ್ರದಲ್ಲಿನ ನಟನೆಗಾಗಿ ಅಕ್ಷತಾ ಈ ಪ್ರಶಸ್ತಿ ಪಡೆದಿದ್ದಾರೆ.

 

 

ಇದೇ ಸಿನಿಮಾಕ್ಕೆ ಚಿತ್ರಕತೆ ಬರೆದ ಕನ್ನಡದ ಚಿತ್ರ ನಿರ್ದೇಶಕ ಪೃಥ್ವಿ ಕೋಣನೂರ್ ಅವರಿಗೆ ಅತ್ಯುತ್ತಮ ಚಿತ್ರಕತೆ ಪ್ರಶಸ್ತಿ ಲಭಿಸಿದೆ. ಜೂನ್ 4ರಿಂದ 13ರವರೆಗೆ ವರ್ಚುವಲ್ ಮಾಧ್ಯಮದಲ್ಲಿ 2021ನೇ ಸಾಲಿನ ಎನ್‍ವೈಐಎಫ್‍ಎಫ್ ನಡೆಯಿತು. ಪ್ರಶಸ್ತಿ ವಿಜೇತರಿಗೆ ಆನ್‍ಲೈನ್‍ನಲ್ಲೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಅಕ್ಷತಾ ಹಾಗೂ ಪೃಥ್ವಿ ಅವರು ಕ್ರಮವಾಗಿ ಅತ್ಯುತ್ತಮ ನಟಿ ಹಾಗೂ ಅತ್ಯುತ್ತಮ ಚಿತ್ರಕತೆ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

Also Read  ಲೈಂಗಿಕ ದೌರ್ಜನ್ಯದ ಅಪರಾಧಿಗಳಿಗೆ 5 ವರ್ಷ ನಿಷೇಧ- ದಕ್ಷಿಣ ಭಾರತೀಯ ಕಲಾವಿದರ ಸಂಘ

 

 

error: Content is protected !!
Scroll to Top