(ನ್ಯೂಸ್ ಕಡಬ) newskadaba,ಕಿನ್ನಿಗೋಳಿ ಜೂ.16: ಮುಲ್ಕಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಸಮಿತಿ ವತಿಯಿಂದ ಕಿನ್ನಿಗೋಳಿ ಪಂಚಾಯತ್ ಎದುರು ಪೆಟ್ರೋಲ್ ಪಂಪ್ ಬಳಿ ಕೇಂದ್ರ ಸರಕಾರದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಮಾತನಾಡಿ ಕೊರೋನಾ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ.ನಾವು ಸಂಕಷ್ಟಕ್ಕೀಡಾದವರಿಗೆ ನ್ಯಾಯ ದೊರಕಿಸಿಕೊಡಲು ಪ್ರತಿಭಟನೆ ನಡೆಸುತ್ತಿದ್ದೇವೆ ವಿನಃ ಅಂಧ ಭಕ್ತರಿಗೆ ಅಲ್ಲಎಂದ್ದರು.
ಪ್ರತಿಭಟನೆಯಲ್ಲಿ ದ. ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಕೆಪಿಸಿಸಿ ವಕ್ತಾರ ವಸಂತ್ ಬೆರ್ನಾಡ್, ಎಪಿಎಂಸಿ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.