ಕೊಂಬಾರು: ಕೃಷಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ ➤ ಅಪಾರ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಕಡಬ ತಾಲೂಕಿನ ಕೊಂಬಾರು ಗ್ರಾಮದಲ್ಲಿ ಕಳೆದ ಹಲವು ಸಮಯಗಳಿಂದ ಸೈಲೆಂಟಾಗಿದ್ದ ಕಾಡಾನೆಯ ಅಟ್ಟಹಾಸ ಮತ್ತೆ ಮುಂದುವರಿದಿದ್ದು, ಗುರುವಾರದಂದು ಹಗಲು ಹೊತ್ತಿನಲ್ಲಿ ಕೃಷಿ ತೋಟಕ್ಕೆ ಲಗ್ಗೆಯಿಟ್ಟಿದೆ.

ಕೊಂಬಾರು ಗ್ರಾಮ ಪಂಚಾಯತ್ ನ ಸಿರಿಬಾಗಿಲು ಗ್ರಾಮದ ಪಿಲಿಕಜೆ ನಿವಾಸಿ ಸುಂದರ ಗೌಡ ಎಂಬವರ ತೋಟಕ್ಕೆ ನುಗ್ಗಿರುವ ಕಾಡಾನೆಯು ಅಪಾರ ಪ್ರಮಾಣದಲ್ಲಿ ಅಡಿಕೆ ಮರ ಹಾಗೂ ಬಾಳೆ ಕೃಷಿಯನ್ನು ಹಾನಿಗೊಳಿಸಿದೆ. ಪರಿಸರದ ಹಲವು ತೋಟಕ್ಕೆ ಲಗ್ಗೆಯಿಟ್ಟಿದ್ದು, ಕಾಡಾನೆ ಹಾವಳಿಯನ್ನು ತಡೆಯಲು ಅರಣ್ಯ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪರಿಸರ ನಿವಾಸಿಗಳು ಆಗ್ರಹಿಸಿದ್ದಾರೆ.

Also Read  ಮಂಗಳೂರು : ಸಫರ್ ಕ್ಲಬ್ ಮತ್ತು ಬ್ಲಡ್ ಹೆಲ್ಪ್ ಕೇರ್ ವತಿಯಿಂದ ರಕ್ತದಾನ ಶಿಬಿರ

 

 

error: Content is protected !!
Scroll to Top