ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ ➤ ಬೆಂಗಳೂರಿನಲ್ಲಿ 933 ಸೇರಿ 4,517 ಹೊಸ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ. 20: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,517 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,06,453ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 120 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 33,883ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 933 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,05,259ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 12 ಮಂದಿ ಬಲಿಯಾಗಿದ್ದಾರೆ.ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 8,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,45,735ಕ್ಕೆ ಏರಿಕೆಯಾಗಿದೆ. ಇನ್ನು 1,26,813 ಸಕ್ರೀಯ ಪ್ರಕರಣಗಳಿವೆ.

error: Content is protected !!

Join the Group

Join WhatsApp Group