ದ. ಕನ್ನಡದಲ್ಲಿ ಜು.5ರವರೆಗೆ ಲಾಕ್‍ಡೌನ್ ವಿಸ್ತರಣೆ ➤ ಡಿಸಿ ಆದೇಶ

(ನ್ಯೂಸ್ ಕಡಬ) newskadaba,ಮಂಗಳೂರು ಜೂ. 20:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 5ರವರೆಗೂ ಲಾಕ್‍ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಅನ್‍ಲಾಕ್ 1.0 ಭಾಗವಾಗಿ ಅಗತ್ಯವಸ್ತುಗಳ ಖರೀದಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸಲ್ ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ. ಜೊತೆಗೆ ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ. ಈ ಸಮಯದಲ್ಲಿ ಮಾತ್ರ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು. ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನ ತೆರೆಯಲು ಅವಕಾಶ ಇಲ್ಲ.

ಖಾಸಗಿ ಹಾಗೂ ಕೆಎಸ್‍ಆರ್ ಟಿಸಿ ಬಸ್‍ಗಳು ಜಿಲ್ಲೆಯಿಂದ ಹೊರಗೆ ಹಾಗೂ ಒಳಗೆ ಓಡಾಟ ಮಾಡುವಂತಿಲ್ಲ. ಅಲ್ಲದೆ ಹೊರ ಜಿಲ್ಲೆಗಳಿಂದಲೂ ಕೆಎಸ್‍ಆರ್ ಟಿಸಿ ಬಸ್‍ಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.ಜುಲೈ 5 ರವರೆಗೂ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 7ರಿಂದ ಬೆಳಗ್ಗೆ 7ರವರೆಗೆ ನೈಟ್ ಕಪ್ರ್ಯೂ ಜಾರಿ ಇರುತ್ತದೆ, ಯಾವುದೇ ವಾಹನ ಓಡಾಟಕ್ಕೂ ಅನುಮತಿ ಇಲ್ಲ. ಅಲ್ಲದೆ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕಪ್ರ್ಯೂ ಜಾರಿ ಇದ್ದು, ಈ ವೇಳೆ ಯಾರೂ ಮನೆಯಿಂದ ಹೊರ ಬರುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

 

error: Content is protected !!

Join the Group

Join WhatsApp Group