(ನ್ಯೂಸ್ ಕಡಬ) newskadaba.com ಕಡಬ, ಜೂ.21. ತಾಲೂಕಿನ ಕೊಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸಿ ಆರ್ ಸಿ ಕಾಲನಿಯಲ್ಲಿ 21 ಕೋವಿಡ್ ಪ್ರಕರಣಗಳು ಕಂಡು ಬಂದಿದ್ದು, ಇವರನ್ನು ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ನವೀನ್ ಭಂಡಾರಿ ಹಾಗೂ ಕಡಬ ತಹಶೀಲ್ದಾರರಾದ ಅನಂತ ಶಂಕರ್ ನೇತೃತ್ವದಲ್ಲಿ ಸೋಮವಾರದಂದು ಪುತ್ತೂರು ತಾಲೂಕಿನ ಬಲ್ನಾಡು ಎಂಬಲ್ಲಿರುವ ಕೋವಿಡ್ ನಿಗಾ ಸೆಂಟರಿಗೆ ಕಳುಹಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಶೀಲ ಶಿವಪ್ರಸಾದ್, ಉಪಾಧ್ಯಕ್ಷರಾದ ಶ್ರೀಮತಿ ಸರಿತಾ, ಕೋವಿಡ್ ನಿಗ್ರಹ ದಳದ ನೋಡೆಲ್ ಅಧಿಕಾರಿ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಕಡಬ ಠಾಣಾ ಎಸ್ಐ ರುಕ್ಮ ನಾಯ್ಕ್, ಕೆ.ಎಫ್.ಡಿ.ಸಿ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರು, ಕೊಂಬಾರು ಗ್ರಾಮ ಕರಣಿಕರು ಹಾಗು ಗ್ರಾಮ ಸಹಾಯಕರು, ಕಿರಿಯ ಅರೋಗ್ಯ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.