ಹದಿನೇಳು ವರ್ಷದ ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ ➤ ಒಂದೇ ದಿನ ತಂದೆ-ಮಗನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.23. ತನ್ನ ಹದಿನೇಳು ವರ್ಷದ ಪುತ್ರನನ್ನೇ ಕೊಲೆಗೈದ ತಂದೆ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ನಿವಾಸಿ ಬಾಬು ನಾಯ್ಕ್ ಎಂಬವರ ಪುತ್ರ ಸಾತ್ವಿಕ್ ಎಂದು ಗುರುತಿಸಲಾಗಿದೆ. ಬುಧವಾರದಂದು ಪುಂಜಾಲಕಟ್ಟೆ ಭಜನಾ ಮಂದಿರದ ಬಳಿ ತಂದೆ ಮತ್ತು ಮಗನ ನಡುವೆ ಯಾವುದೋ ಕಾರಣಕ್ಕೆ ಜಗಳ ನಡೆದಿದ್ದು, ಈ ವೇಳೆ ಕೋಪಗೊಂಡ ತಂದೆ ಮಗನನ್ನು ಕೊಲೆಗೈದಿದ್ದಾರೆ ಎನ್ನಲಾಗಿದೆ. ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಿಳಿದುಬಂದಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಚಿತ್ರೀಕರಣ ವೇಳೆ ಅಪಘಾತ ➤ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲು..!!

 

 

 

error: Content is protected !!
Scroll to Top