ಮನೆಯಲ್ಲಿದ್ದ ಅಡಿಕೆ ಚೀಲವನ್ನು ಕದ್ದೊಯ್ದ ಪಕ್ಕದ ಮನೆಯಾತ ➤ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಮನೆಯಲ್ಲಿರಿಸಿದ್ದ ಅಡಿಕೆ ಚೀಲವನ್ನು ಪರಿಚಿತ ವ್ಯಕ್ತಿಯೋರ್ವ ಕದ್ದೊಯ್ದ ಘಟನೆ ಠಾಣಾ ವ್ಯಾಪ್ತಿಯ ಹಳೆನೇರಂಕಿ ಎಂಬಲ್ಲಿ ಬುಧವಾರದಂದು ನಡೆದಿದೆ.


ಹಳೆ ನೇರಂಕಿ ಗ್ರಾಮದ ಅಲೆಪ್ಪಾಡಿ ನಿವಾಸಿ ಸುಕೇಶ ಎಂಬವರು ತನ್ನ ಮನೆಯ ಅಂಗಳದಲ್ಲಿ ಎರಡು ಗೋಣಿ ಚೀಲಗಳಲ್ಲಿ ಅಡಿಕೆಯನ್ನು ಇರಿಸಿದ್ದರು ಎನ್ನಲಾಗಿದೆ. ಬುಧವಾರದಂದು ಮನೆಮಂದಿ ತೋಟಕ್ಕೆ ತೆರಳಿದ್ದ ವೇಳೆ ಪಕ್ಕದ ಮನೆಯ ಪರಮೇಶ್ವರ್ ಎಂಬಾತ ಒಂದು ಗೋಣಿ ಚೀಲ ಅಡಿಕೆಯನ್ನು ಎಗರಿಸಿರುವುದಾಗಿ ಸುಕೇಶ ಕಡಬ ಠಾಣೆಗೆ ದೂರು ನೀಡಿದ್ದಾರೆ.

Also Read  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಕೊಲೆಗಳ ಪ್ರಕರಣ ➤ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ನಾಯಕ ಒತ್ತಾಯ

 

 

 

error: Content is protected !!
Scroll to Top