ಬಂಧನ ಭೀತಿಯಲ್ಲಿ ಸಿಡಿ ಲೇಡಿ ➤ ಯುವತಿಯ ಮನವಿಯನ್ನು ನಿರಾಕರಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.24. ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ತನ್ನನ್ನು ಬಂಧಿಸದಂತೆ ಎಸ್‌ಐಟಿಗೆ ನಿರ್ದೇಶಿಸಬೇಕೆಂಬ ಸಂತ್ರಸ್ತ ಯುವತಿಯ ಮನವಿಯನ್ನು ಹೈಕೋರ್ಟ್‌ ನಿರಾಕರಿಸಿದ್ದು, ಇದೀಗ ಸಿಡಿ ಲೇಡಿಗೆ ಬಂಧನ ಭೀತಿ ಎದುರಾಗಿದೆ.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಸಂಬಂಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ದೂರನ್ನು ರದ್ದುಪಡಿಸುವಂತೆ ಕೋರಿ ಯುವತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕ ಸದಸ್ಯಪೀಠ ಯುವತಿಯ ಮನವಿಯನ್ನು ನಿರಾಕರಿಸಿದೆ.

 

 

 

Scroll to Top