ಎಸ್​ಎಸ್​ಎಲ್​ಸಿ ಪರೀಕ್ಷೆ ➤ ಕೋವಿಡ್ ಕರ್ತವ್ಯದಿಂದ ಶಿಕ್ಷಕರಿಗೆ ಬಿಡುಗಡೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24:  ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಬರೆದ ಪತ್ರದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಾದ ಶಿಕ್ಷಕರು ಕೋವಿಡ್ ಲಸಿಕೆ ಪಡೆಯುವುದು ಮತ್ತು ಪರೀಕ್ಷಾ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಈಗಾಗಲೇ ಶೈಕ್ಷಣಿಕ ಚುಟುವಟಿಕೆಗಳು ಪ್ರಾರಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಹ ನಡೆಯುತ್ತಿದೆ. ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಿರಬೇಕಿರುವುದರಿಂದ ತಕ್ಷಣವೇ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಸಚಿವರು ತಿಳಿಸಿದ್ದಾರೆ.

Also Read  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

error: Content is protected !!
Scroll to Top