ಆತೂರು: ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣ ➤ ಇಬ್ಬರ ಬಂಧನ



(ನ್ಯೂಸ್ ಕಡಬ) newskadaba.com ಕಡಬ, ಜು.03. ಇತ್ತೀಚೆಗೆ ಆತೂರು ಚೆಕ್ ಪೋಸ್ಟ್ ಧ್ವಂಸ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಡಬ ಪೋಲಿಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.





ರಾಮಕುಂಜ ಗ್ರಾಮದ ಹಲ್ಲಿ ಅರಮನೆ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಆಫೀಸ್ (28) ಹಾಗೂ ಕೊಯಿಲ ಗ್ರಾಮದ ಎಂತಾರು ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ನವಾಜ್ (27) ಎಂಬವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ವಕೀಲರಾದ ಅಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್‌ಖಾನ್, ಅಬ್ದುಲ್ ರಹಿಮಾನ್ ಹಿರೇಬಂಡಾಡಿ ವಾದಿಸಿದ್ದಾರೆ.






 

 

 

error: Content is protected !!
Scroll to Top