ನಿಮ್ಮ ಮನೆಯಲ್ಲಿ ಗ್ಯಾಸ್ ಗೀಝರ್ ಇದ್ದರೆ ಈ ಸುದ್ದಿ ಓದಿ ನೋಡಿ ➤ ಬಂಟ್ವಾಳ: ಸ್ನಾನಕ್ಕೆ ತೆರಳಿದ ಯುವಕ ಉಸಿರುಗಟ್ಟಿ ಮೃತ್ಯು



(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.13. ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಝರ್ ನಿಂದ ಹೊರಬಂದ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.





ಮೃತ ಯುವಕನನ್ನು ಮಾರಿಪಳ್ಳ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇಜಾಝ್ ಅಹ್ಮದ್ (23) ಎಂದು ಗುರುತಿಸಲಾಗಿದೆ. ಈತ ಸ್ನಾನದ ಕೊಠಡಿಯ ಒಳಗಿದ್ದ ಗ್ಯಾಸ್ ಗೀಝರ್ ಅನ್ನು ಆನ್ ಮಾಡಿ ಸ್ನಾನ ಮಾಡುತ್ತಿದ್ದ ವೇಳೆ ಗೀಝರ್ ನಿಂದ ಗೀಝರ್ ನಿಂದ ಹೊರ ಬರುವ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಈ ದುರ್ಘಟನೆ ಸಂಭವಿಸಿದೆ. ಸ್ನಾನಕ್ಕೆ ತೆರಳಿದ್ದ ಇಜಾಝ್ ಅಹ್ಮದ್ ಒಂದು ಗಂಟೆಯಾದರೂ ಹೊರ ಬರದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ನೋಡಿದಾಗ ಆತ ಕೊಠಡಿಯಲ್ಲಿ ಬಿದ್ದಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗೆ ಆತ ಮೃತಪಟ್ಟಿದ್ದ.






 

 

 

error: Content is protected !!
Scroll to Top