ನೆಲ್ಯಾಡಿ: ಒಂದೇ ದಿನ ಪತಿ- ಪತ್ನಿ ಕೊರೋನಾಗೆ ಬಲಿ

(ನ್ಯೂಸ್ ಕಡಬ) Newskadaba.com ನೆಲ್ಯಾಡಿ, ಜು. 16. ಪತಿ ಹಾಗೂ ಪತ್ನಿ ಒಂದೇ ದಿನ ಕೊರೋನಾಗೆ ಮೃತಪಟ್ಟ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿಗಳೆಂದು ಗುರುತಿಸಲಾಗಿದೆ. ಇವರಿಬ್ಬರಿಗೂ ಜೂ. 25ರಂದು ಜ್ವರ ಕಾಣಿಸಿಕೊಂಡಿದ್ದು, ಔಷಧಿ ಪಡೆದು ಗುಣಮುಖರಾಗಿದ್ದರು. ನಂತರ ಮತ್ತೆ ಜ್ವರ ಉಲ್ಭಣಿಸಿದ ಹಿನ್ನೆಲೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಪಾಸಣೆ ವೇಳೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇವರಿಬ್ಬರ ಪೈಕಿ ಪತ್ನಿ ಗುರುವಾರದಂದು ಮಧ್ಯಾಹ್ನ 1.30ರ ವೇಳೆಗೆ ಮೃತರಾಗಿದ್ದು, ಪತಿ ಸಂಜೆ 7 ಗಂಟೆ ವೇಳೆಗೆ ನಿಧನರಾಗಿದ್ದಾರೆ.

Also Read  ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

error: Content is protected !!
Scroll to Top