ಕಂಬಳ ಓಟಗಾರ ಶ್ರೀನಿವಾಸ್ ಗೌಡರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ- ದೂರು ದಾಖಲು ➤ ಆರೋಪಿಯ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯ

(ನ್ಯೂಸ್ ಕಡಬ) Newskadaba.com ಮೂಡುಬಿದಿರೆ, ಜು. 17. ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ಕ್ಷೇತ್ರದಲ್ಲಿ ಅತೀ ವೇಗದ ಓಟಗಾರನೆಂದು ಪ್ರಸಿದ್ದಿ ಗಳಿಸಿರುವ ಅಶ್ವತ್ಥಪುರದ ಶ್ರೀನಿವಾಸ ಗೌಡ ರವರಿಗೆ ಪ್ರಶಾಂತ್ ಎಂಬಾತ ದೂರವಾಣಿ ಮುಖಾಂತರ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆಡಿಯೋವೊಂದು ಇದೀಗ ವೈರಲ್ ಆಗಿದೆ.

ದೂರವಾಣಿ ಕರೆ ಮೂಲಕ ನಿಂದಿಸಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ. ಅಲ್ಲದೆ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಉಮಾನಾಥ ಕೋಟ್ಯಾನ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಕಂಬಳದ ವಿಚಾರವಾಗಿ ಪ್ರಶಾಂತ್ ಎಂಬಾತನ ಜೊತೆ ಶ್ರೀನಿವಾಸರು ಮಾತನಾಡುತ್ತಿದ್ದ ವೇಳೆ ಆತ ತನ್ನನ್ನು ಹಾಗೂ ತನ್ನ ಕುಟುಂಬದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಶ್ರೀನಿವಾಸ ಗೌಡರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.

Also Read  ಸುಬ್ರಹ್ಮಣ್ಯ: ಕುಕ್ಕೇ ಶ್ರೀ ದೇವಸ್ಥಾನದಲ್ಲಿ ಗೋಪೂಜೆ

error: Content is protected !!