(ನ್ಯೂಸ್ ಕಡಬ) newskadaba.com ಸಕಲೇಶಪುರ, ಜು.22. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ಸಮೀಪದ ದೋಣಿಗಲ್ ಎಂಬಲ್ಲಿ ಹೆದ್ದಾರಿ ಕುಸಿದಿದೆ.
ಹೆದ್ದಾರಿಯ ಒಂದು ಭಾಗ ಕುಸಿದಿದ್ದು, ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ರಸ್ತೆ ದುರಸ್ತಿ ಆಗುವವರೆಗೂ ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುವ ವಾಹನ ಚಾಲಕರು ಚಾರ್ಮಾಡಿ ಅಥವಾ ಬೇರೆ ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿದೆ.