ಅಡುಗೆ ಮಾಹಿತಿ ► ದೇಹಕ್ಕೆ ತಂಪು ನೀಡುವ, ರಾಗಿ ಗಂಜಿ ಮಾಡುವ ವಿಧಾನ…

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ಅ.30. ಬೇಸಿಗೆಯಲ್ಲಿ ಹೆಚ್ಚಿನ ಉಷ್ಣದಿಂದಾಗಿ ದೇಹವು ನಾನಾ ಬಾಧೆಗೆ ಒಳಗಾಗುತ್ತದೆ. ಬಿಸಿಲಲ್ಲಿ ತಂಪು ಪಾನೀಯಗಳನ್ನು ಜಾಸ್ತಿಯಾಗಿ ಸೇವಿಸಿದ್ರೆ ಆರೋಗ್ಯಕ್ಕೆ ಮತ್ತಷ್ಟು ಹಾನಿಯಾಗುತ್ತದೆ.

ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡೋ ರಾಗಿಯಿಂದ ಮಾಡಿದ ಆಹಾರ ಉತ್ತಮ.  ಬೇಸಿಗೆಯಲ್ಲಿ ಪ್ರತಿದಿನ ರಾಗಿ ಗಂಜಿ ಅಥವಾ ರಾಗಿ ಅಂಬಲಿ ಮಾಡಿ ಕುಡಿದರೆ ಆರೋಗ್ಯಕ್ಕೂ ಒಳ್ಳೆಯದು.

ಬೇಕಾಗುವ ಸಾಮಾಗ್ರಿಗಳು:

  1. ರಾಗಿ ಹಿಟ್ಟು – 4 ಚಮಚ
  2.  ಪುಡಿ ಮಾಡಿದ ಜೀರಿಗೆ – 1/2 ಚಮಚ
  3.  ಮೊಸರು ಅಥವಾ ಮಜ್ಜಿಗೆ – 1 ಕಪ್
  4.  ನೀರು – 2 ಲೋಟ
  5.  ಉಪ್ಪು – ರುಚಿಗೆ ತಕ್ಕಷ್ಟು

ಮಾಡುವ ವಿಧಾನ:

* ಒಂದು ಪಾತ್ರೆಯಲ್ಲಿ ರಾಗಿ ಹಿಟ್ಟನ್ನು ಹಾಕಿ ಅದಕ್ಕೆ 1/2 ಕಪ್ ನಷ್ಟು ನೀರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಬಳಿಕ ಉಳಿದ ನೀರು ಹಾಕಿ ಕಲಸಿಕೊಳ್ಳಿ.
* ನಂತರ ಒಲೆಯ ಮೇಲೆ ಒಂದು ಪಾತ್ರೆ ಇಟ್ಟು, ರಾಗಿ ಹಿಟ್ಟಿನ ಮಿಶ್ರಣವನ್ನ ಹಾಕಿ ಗಂಟಾಗದಂತೆ ಕೈಯ್ಯಾಡಿಸುತ್ತಾ 3 ನಿಮಿಷದವರೆಗೆ ಕಾಯಿಸಿಕೊಳ್ಳಿ.
* ಹಿಟ್ಟು ಸ್ವಲ್ಪ ಗಟ್ಟಿ ಆದಾಗ ಅದಕ್ಕೆ ಉಪ್ಪು ಮತ್ತು ಜೀರಿಗೆ ಪುಡಿ ಹಾಕಿ ಮಿಕ್ಸ್ ಮಾಡಿ ನಂತರ ಒಲೆಯಿಂದ ಕೆಳಗಿಳಿಸಿ ಆರಲು ಬಿಡಿ.
* ಗಂಜಿ ಸಂಪೂರ್ಣ ತಣ್ಣಗಾದ ಬಳಿಕ ಮೊಸರು ಅಥವಾ ಮಜ್ಜಿಗೆಯನ್ನು ಹಾಕಿ ಮಿಕ್ಸ್ ಮಾಡಿದರೆ ರಾಗಿ ಅಂಬಲಿ ಸವಿಯಲು ಸಿದ್ಧ. ಇದಕ್ಕೆ ಸಣ್ಣಗೆ ಕಟ್ ಮಾಡಿದ ಈರುಳ್ಳಿ ಸೇರಿಸಿಕೊಳ್ಳಬಹುದು.

 

 

error: Content is protected !!

Join the Group

Join WhatsApp Group