ಅಣ್ಣನ ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ➤ ಸಲಾಕೆಯಿಂದ ಹೊಡೆದು ತಮ್ಮನನ್ನು ಕೊಂದ ಅಣ್ಣ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.07. ಅತ್ತಿಗೆಯ ಜೊತೆ ಅನೈತಿಕ ಸಂಬಂಧ ಹೊಂದಿದ ಆರೋಪದಲ್ಲಿ ಸ್ವಂತ ತಮ್ಮನನ್ನು ಅಣ್ಣನೇ ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.





ಕೊಲೆಯಾದ ವ್ಯಕ್ತಿಯನ್ನು ಶಾಂತಿಗುಡ್ಡೆ ನಿವಾಸಿ ಸುಂದರ(30) ಎಂದು ಗುರುತಿಸಲಾಗಿದೆ. ಅವಿವಾಹಿತವಾಗಿದ್ದ ಸುಂದರ ಮೂಲ ಮನೆಯಲ್ಲಿ ಒಬ್ಬನೇ ವಾಸವಾಗಿದ್ದು, ಆತನ ಮನೆಯ ಸಮೀಪದಲ್ಲಿರುವ ಅಣ್ಣನ ಮನೆಯಿಂದ ಅತ್ತಿಗೆ ಊಟ- ತಿಂಡಿ‌ ನೀಡುತ್ತಿದ್ದರು ಎನ್ನಲಾಗಿದೆ. ಅತ್ತಿಗೆಯ ಜೊತೆ ಅನೈತಿಕ‌ ಸಂಬಂಧವಿದೆ ಎಂದು ಆರೋಪಿಸಿ ಆತನ ಅಣ್ಣ ರವಿ ಹಾಗೂ ಸುಂದರ ನಡುವೆ ಪದೇ ಪದೇ ಜಗಳ ನಡೆಯುತ್ತಲೇ ಇತ್ತು ಎನ್ನಲಾಗಿದೆ. ಶುಕ್ರವಾರ ತಡರಾತ್ರಿಯೂ ಅವರ ಮಧ್ಯೆ ಜಗಳ ನಡೆದಿದ್ದು, ಸುಂದರ ಬೊಬ್ಬೆ ಹೊಡೆಯುವುದನ್ನು ಕೇಳಿ ಮತ್ತೋರ್ವ ಅಣ್ಣ ರಮೇಶ ಅವರು ಹೋಗಿ ನೋಡಿದಾಗ, ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ತಲೆಗೆ ಹೊಡೆದಿದ್ದು, ರಕ್ತದ ಮಡುವಿನಲ್ಲಿ ಬಿದ್ದ ಸುಂದರ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಈ ವೇಳೆ ಆರೋಪಿ ರವಿಯು ಓಡಿ ಹೋಗಿದ್ದಾನೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

 

error: Content is protected !!
Scroll to Top