ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ➤ ಸರಳ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಇಂದು ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ವೇಳೆ ಅಗತ್ಯ ವಸ್ತುಗಳ ಖರೀದಿಗೆ ಕಳೆದ ವಾರದ ವೀಕೆಂಡ್ ಕರ್ಫ್ಯೂನಂತೆ ಅಪರಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ನಡೆಸಲು ಉದ್ದೇಶಿಸಲಾಗಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದವರು ತಿಳಿಸಿದ್ದಾರೆ. ರವಿವಾರದಂದು ಸರಳ ರೀತಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Also Read  ಕಾರು- ಬೈಕ್ ನಡುವೆ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹರಿದ ಲಾರಿ ➤➤ ಸವಾರ ಸ್ಥಳದಲ್ಲೇ ಮೃತ್ಯು

 

 

 

 

error: Content is protected !!
Scroll to Top