ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಓರ್ವನ ಬಂಧನ, 4 ಕರು, 40 ಕೆಜಿ ದನದ ಮಾಂಸ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ಅಕ್ರಮ‌ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 40 ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಳಾರ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಶೆಡ್ ನಲ್ಲಿ ಅಕ್ರಮವಾಗಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಡಬ ಎಸ್ಐ ರುಕ್ಮನಾಯ್ಕ್ ಹಾಗೂ ಸಿಬ್ಬಂದಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಪರಾರಿಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಹರೀಶ್, ಶ್ರೀಶೈಲ, ಹರೀಶ್ ಹಾಗೂ ಗೃಹರಕ್ಷಕ ದಳದ ಯೋಗೀಶ್, ಅನಿತ್ ಭಾಗವಹಿಸಿದ್ದರು.

Also Read  ಪೊಲಿಯೋ ಬದಲು ಸ್ಯಾನಿಟೈಸರ್ ನೀಡಿದ ಆರೋಗ್ಯ ಸಿಬ್ಬಂದಿ ➤ 12 ಮಕ್ಕಳು ಅಸ್ವಸ್ಥ

 

 

 

error: Content is protected !!
Scroll to Top