ವಿಟ್ಲ: ಆಟೋ ರಿಕ್ಷಾ – ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ.27. ಆಟೋ ರಿಕ್ಷಾ ಹಾಗೂ ಇಂಡಿಕಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಪುಣಚ ಗ್ರಾಮದ ಮಣಿಲ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಮೃತ‌ ರಿಕ್ಷಾ ಚಾಲಕನನ್ನು ಪರಿಯಾಲ್ತಡ್ಕ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಮಣಿಲ ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಅಶ್ರಫ್ ರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Also Read  ಕಡಬ: ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಮೇಯಲು ಬಿಟ್ಟರೆ ದಂಡ - ಪಟ್ಟಣ ಪಂಚಾಯತ್ ಎಚ್ಚರಿಕೆ

 

 

 

 

error: Content is protected !!
Scroll to Top