ಬಲೆನೋ ಕಾರು – ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಮೂವರಿಗೆ ಗಾಯ



(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.14. ಆಟೋ ರಿಕ್ಷಾ ಹಾಗೂ ಬಲೆನೋ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಮಂಗಳವಾರದಂದು ಪುತ್ತೂರಿನ ಬೊಳ್ವಾರಿನಲ್ಲಿ ನಡೆದಿದೆ.





ಬೊಳ್ವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದಲ್ಲಿ ಅಪಘಾತ ಸಂಭವಿಸಿದ್ದು, ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಫಕೀರ್ ಸಾಹೇಬ್ ಹಾಗೂ ಇನ್ನಿಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

 

 

error: Content is protected !!
Scroll to Top