(ನ್ಯೂಸ್ ಕಡಬ) newskadaba.com ಬೆಳಗಾವಿ, ಅ.03. ಬಿಜೆಪಿಯ 40 ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಜು ಕಾಗೆ ನೀಡಿರುವ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಯಾಗಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಮದಭಾವಿ ಎಂಬಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜು ಕಾಗೆ, ರಾಜ್ಯ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲದೇ ಇರುವುದರಿಂದ ಎಲ್ಲಯ ರಂಗಗಳಲ್ಲೂ ವಿಫಲವಾಗಿದೆ. ಬಿಜೆಪಿಯಲ್ಲಿ ಬೇಸತ್ತಿರುವ 40 ರಷ್ಟು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಗೆ ಹಾರಿಸಿದ್ದಾರೆ. ಕಾಗೆಯವರ ಹೇಳಿಕೆಗೆ ಇದೀಗ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಯಾಗಿದೆ.