ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಶಿರಾಡಿ ಘಾಟ್ ನಲ್ಲಿ ರಸ್ತೆ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.07. ಗ್ಯಾಸ್ ಸಾಗಿಸುತ್ತಿದ್ದ ಬುಲೆಟ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ ಸಮೀಪ ಗುರುವಾರದಂದು ಸಂಭವಿಸಿದೆ.

ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿರಾಡಿ ಘಾಟ್ ಮೂಲಕ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆಯಲ್ಲಿ ಚಾಲಕ ಟ್ಯಾಂಕರ್ ಒಳಗೆ ಸಿಲುಕೊಕೊಂಡಿದ್ದು, ಹೊರತೆಗೆಯಲು ಎರಡು ಗಂಟೆಗೂ ಅಧಿಕ ಕಾಲ ಹರಸಾಹಸಪಡಬೇಕಾಯಿತು.

Also Read  ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ➤ ಡೆಂಗ್ಯೂ ನಿಯಂತ್ರಣ ಹಾಗೂ ಮುಂಜಾಗೃತಾ ಕ್ರಮ

 

 

 

error: Content is protected !!
Scroll to Top