ಸುಳ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಸುಳ್ಯ, ಅ. 13. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಂಗ್ಲೆಗುಡ್ಡೆಯ ಲಿಖಿತ್(22) ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಅಡ್ಡಕ್ಕೆ ಹಗ್ಗ ಹಾಕಿ ನೇಣು ಹಾಕಿಕೊಂಡಿದ್ದು, ತಕ್ಷಣವೇ ಆತನನ್ನು ಕೆಳಗಿಳಿಸಿ ಸಂಪಾಜೆ ಆರೋಗ್ಯ ಕೇಂದ್ರಕ್ಕೆ ಕರೆತಂದು ಅಲ್ಲಿಂದ ಬಳಿಕ ಸುಳ್ಯ ಸರಕಾರಿ ಆಸ್ಪತ್ರೆ ಗೆ ತಂದಿದ್ದರು. ಆತನನ್ನು ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

Scroll to Top