ಮಂಗಳೂರು: ಮಗುವನ್ನು ಬದಲಾಯಿಸಿದ ಲೇಡಿಗೋಶನ್ ಆಸ್ಪತ್ರೆ ವೈದ್ಯರು ➤ DNA ಪರೀಕ್ಷೆಗೆ ಪೋಷಕರ ಒತ್ತಾಯ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 15. ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ತಾಯಿಗೆ ಗಂಡು ಮಗು ನೀಡಿ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯ ಎಡವಟ್ಟು ಮಾಡಿದ್ದು, ಈ ಬಗ್ಗೆ ಪೋಷಕರು ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಕುಂದಾಪುರ ಮೂಲದ ಅಮ್ರಿನ್ ಎಂಬವರಿಗೆ ಸೆಪ್ಟೆಂಬರ್ 27 ರಂದು ತಡರಾತ್ರಿ 12 ಗಂಟೆಗೆ ಹೆರಿಗೆಯಾಗಿತ್ತು. ಆಸ್ಪತ್ರೆಯ ದಾಖಲಾತಿ ಪ್ರಕಾರ ಮಗುವನ್ನು ಹೆಣ್ಣು ಎಂದು ನಮೂದಿಸಲಾಗಿತ್ತು. ಆದರೆ ಮಗುವಿನ ದೈಹಿಕ ತೂಕ ಕಡಿಮೆಯಿದೆ ಎಂಬ ಕಾರಣಕ್ಕೆ ಕಳೆದ 18 ದಿನಗಳಿಂದ ಮಗುವನ್ನು ಐಸಿಯುನಲ್ಲಿ ಇರಿಸಿದ್ದಾಗಿ ಪೋಷಕರು ತಿಳಿಸಿದ್ದಾರೆ. ಅ. 14ರಂದು ಪೋಷಕರು, ಮಗು ಹಾಗೂ ತಾಯಿಯನ್ನು ಡಿಸ್ಚಾರ್ಜ್ ಮಾಡುವಂತೆ ತಿಳಿಸಿದ್ದರು. ಈ ವೇಳೆ ಮಗುವಿಗೆ ಮಲ ವಿಸರ್ಜನೆ ಸಮಸ್ಯೆ ಇರುವುದಾಗಿ ಲೇಡಿಗೋಶನ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇದರಿಂದ ತಕ್ಷಣ ಬ್ರಹ್ಮಾವರ ಮಹೇಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಅಮ್ರಿನ್ ಪತಿ ಮುಸ್ತಫಾ ನಿರ್ಧರಿಸಿದ್ದಾರೆ. ಅಂತೆಯೇ,‌ ಬ್ರಹ್ಮಾವರಕ್ಕೆ ಕೊಂಡೊಯ್ಯಲಾಗಿದ್ದು, ಅಲ್ಲಿ ಮಗು ಬದಲಾಯಿಸಿ ಕೊಟ್ಟಿರುವ ವಿಚಾರ ಬಯಲಾಗಿದೆ.

Also Read  80 ಜನರಿಗೆ ವಾಟ್ಸಪ್ ಸಂದೇಶ ಕಳುಹಿಸಿ ►18ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯ ಆತ್ಮಹತ್ಯೆ..!!!


ಇದರಿಂದ ಕುಪಿತರಾದ ಪೋಷಕರು ಮತ್ತೆ ಮಂಗಳೂರು ಆಸ್ಪತ್ರೆಗೆ ಕರೆ ತಂದಿದ್ದು, ಲೇಡಿಗೋಶನ್ ಆಸ್ಪತ್ರೆ ವೈದ್ಯರ ಸುಪರ್ದಿಗೆ ಒಪ್ಪಿಸಿದ್ದಾರೆ. ಅಲ್ಲದೇ, ಸ್ಥಳೀಯ ಸಾಮಾಜಿಕ ಕಾರ್ಯಕರ್ತರ ಬೆಂಬಲದೊಂದಿಗೆ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಂದರು ಪೊಲೀಸರು ಘಟನೆ ಕುರಿತು ಪರಿಶೀಲಿಸಿದ್ದಾರೆ. ಮಗುವಿನ DNA ಪರೀಕ್ಷೆ ನಡೆಸಿ ನ್ಯಾಯ ಒದಗಿಸುವಂತೆ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Also Read  ಅಂಬುಲೆನ್ಸ್‌ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

error: Content is protected !!
Scroll to Top