ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ನೀರುಪಾಲಾದ ಯುವಕ..!

(ನ್ಯೂಸ್ ಕಡಬ) Newskadaba.com ಕಲ್ಲಿಕೋಟೆ, ಅ. 15. ಸ್ನಾನಕ್ಕೆಂದು ಕಾಲುವೆಗೆ ತೆರಳಿದ್ದ ಮೂವರು ಮಕ್ಕಳು ಮುಳುಗುತ್ತಿದ್ದುದನ್ನು ಕಂಡ ಯುವಕನೋರ್ವ ಮೂವರು ಮಕ್ಕಳನ್ನು ರಕ್ಷಿಸಿ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕೇರಳದ ಕುಟ್ಟಿಯಾಡಿ ಪ್ರದೇಶದ ವಿಲಾಪಳ್ಳಿ ಅರಯಾಕೂಲ್ ಎಂಬಲ್ಲಿ ನಡೆದಿದೆ.

ಮೃತರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಾರ್ಯಕರ್ತ ಝಹೀರ್(40) ಎಂದು ಗುರುತಿಸಲಾಗಿದೆ. ಇವರು ಮಾಹಿ ಕಾಲುವೆಗೆ ಸ್ನಾನಕ್ಕೆಂದು ತೆರಳಿದ್ದ ಮಕ್ಕಳು ನೀರಿನ ಸುಳಿಗೆ ಸಿಲುಕಿ ಮುಳುಗುತ್ತಿದ್ದು, ಜೊತೆಗಿದ್ದ ಮಕ್ಕಳ ಕಿರುಚಾಟವನ್ನು ಕೇಳಿದ ಝಹೀರ್, ಮೂವರು ಮಕ್ಕಳನ್ನು ರಕ್ಷಿಸಿದ್ದಾರೆ. ಬಳಿಕ ನಿಯಂತ್ರಣ ತಪ್ಪಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದರೂ ಝಹೀರ್‌ನನ್ನು ಉಳಿಸಲು ಸಾಧ್ಯವಾಗಲಿಲ್ಲ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಸ್ಥಳೀಯರ ಒಂದೂವರೆ ಗಂಟೆ ಸುದೀರ್ಘ ಹುಡುಕಾಟದ ನಂತರ ಝಹೀರ್ ಮೃತದೇಹ ಪತ್ತೆಯಾಗಿದೆ.

Also Read  ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ  ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ

error: Content is protected !!
Scroll to Top