ಮೈಸೂರು: ಹೆಚ್‍ಡಿ ಕೋಟೆಯ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

(ನ್ಯೂಸ್ ಕಡಬ) newskadaba.com ಮೈಸೂರು, .1. ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹೆಚ್‍ಡಿ ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ಅವರು ಬುಧವಾರ ನಸುಕಿನ ಜಾವ 2 ಗಂಟೆಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕಳೆದ ಮೂರು ದಿನಗಳಿಂದ ಮೈಸೂರಿನ ಅರವಿಂದ ಆಸ್ಪತ್ರೆಯಲ್ಲಿ ಶಾಸಕ ಚಿಕ್ಕಮಾದು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಶಾಸಕ ಚಿಕ್ಕಮಾದು ಅವರ ಪಾರ್ಥೀವ ಶರೀರವನ್ನು ಅರವಿಂದ ಆಸ್ಪತ್ರೆಯಿಂದ ಮೈಸೂರಿನ ವಿಜಯನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಮಾಜಿ ಸಂಸದ ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೆಗೌಡ, ಸಾ.ರಾ.ಮಹೇಶ್ ಸೇರಿದಂತೆ ಹಲವು ಪ್ರಮುಖರು ಚಿಕ್ಕಮಾದು ಅವರ ಅಂತಿಮ ದರ್ಶನ ಪಡೆದರು. ಶಾಸಕ ಚಿಕ್ಕಮಾದು ಇಬ್ಬರು ಪತ್ನಿಯರು ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

Also Read  ಆಲಂಕಾರು ಸಿ.ಎ ಬ್ಯಾಂಕಿನ ದೀನ ದಯಾಳು ರೈತ ಸಭಾಭವನ ಉದ್ಘಾಟನೆ ➤ಸಹಕಾರಿ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಅಭಿಮತ

ಕೆ.ಆರ್.ನಗರ ತಾಲೂಕಿನ ಹೊಸೂರು ಕಲ್ಲಹಳ್ಳಿಯಲ್ಲಿ ಜನಿಸಿದ್ದ ಚಿಕ್ಕಮಾದು ಅವರು, ಹುಣಸೂರು ತಾಲೂಕಿನ ಹೊಸ ರಾಮೇನಹಳ್ಳಿಯಲ್ಲಿ ಹಲವು ವರ್ಷ ವಾಸವಿದ್ದರು. ನಂತರ ಮೈಸೂರಿಗೆ ಶಿಫ್ಟ್ ಆಗಿದ್ದರು. 1978 ರಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಧುಮುಕಿ, 1991ರಲ್ಲಿ ಹುಣಸೂರು ಕ್ಷೇತ್ರದಿಂದ ಚುನಾಯಿತರಾಗಿದ್ದರು. ನಂತರದ ದಿನಗಳಲ್ಲಿ ಜೆಡಿಎಸ್ ಸೇರಿದ ಚಿಕ್ಕಮಾದು ಅವರು 2007ರಲ್ಲಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ರು. 2013ರಲ್ಲಿ ಹೆಚ್ ಡಿ ಕೋಟೆ ಕ್ಷೇತ್ರದಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು.

error: Content is protected !!
Scroll to Top