ನೀರಿನಲ್ಲಿ ಮುಳುಗಿ ನಾಲ್ವರು ದುರ್ಮರಣ ➤ ದುರ್ಗಾದೇವಿ ವಿಗ್ರಹ ವಿಸರ್ಜನೆಯ ವೇಳೆ ನಡೆದ ಘಟನೆ

(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 16. ದುರ್ಗಾ ದೇವಿಯ ವಿಗ್ರಹ ವಿಸರ್ಜನೆಯ ವೇಳೆ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಜಯಪ್ರಕಾಶ್(22), ಶ್ರೀಕೃಷ್ಣ(23), ರಾಜೇಶ್ (26) ಹಾಗೂ ಅವರ ಸಹೋದರ ರಣವೀರ್ ಸಿಂಗ್ (24) ಎಂದು ಗುರುತಿಸಲಾಗಿದೆ. ಇವರೆಲ್ಲ ಇಲ್ಲಿನ ಭೂತೇಶ್ವರ ದೇವಾಲಯ ಸಮೀಪದ ಪಾರ್ವತಿ ನದಿಯಲ್ಲಿ ದುರ್ಗಾದೇವಿಯ ವಿಗ್ರಹ ವಿಸರ್ಜನೆಗೆಂದು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read  ಕ್ಷುಲ್ಲಕ ಕಾರಣಕ್ಕೆ ಸ್ನೇಹಿತಗೆ ಚಾಕುವಿನಿಂದ ಇರಿತ..!!!

error: Content is protected !!
Scroll to Top