(ನ್ಯೂಸ್ ಕಡಬ) newskadaba.com ಮಂಗಳೂರು, ಅ. 23. ಇಂರ್ಟನ್‌ಶಿಪ್ ಗೆಂದು ಬಂದಿದ್ದ ಕಾನೂನು ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಅವರನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್ ನಿಂದ ಅಮಾನತು ಮಾಡಲಾಗಿದೆ.
ವಕೀಲರ ಪರಿಷತ್ ಅಧ್ಯಕ್ಷ ಎಲ್. ಶ್ರೀನಿವಾಸ ಬಾಬು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜೇಶ್ ಭಟ್ ಅವರನ್ನು ಮುಂದಿನ ಆದೇಶದವರೆಗೆ ಅಮಾನತು ಮಾಡಲಾಗಿದೆ ಮತ್ತು ಅವರ ವಿರುದ್ಧ ಶಿಸ್ತು ಸಮಿತಿಯಿಂದ ವಿಚಾರಣೆ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.