(ನ್ಯೂಸ್ ಕಡಬ) Newskadaba.com ಮುಲ್ಕಿ, ಅ. 23. ರೈಲು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಮುಲ್ಕಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ಇಬ್ರಾಹೀಂ ಎಂಬವರ ಮಗಳು ಸಕೀನಾ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಹಾಗೂ ಮುಲ್ಕಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.