ಮಾನಸಿಕವಾಗಿ ನೊಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 25. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಕುಡುಪಾಡಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪ್ರಶಾಂತ್ ಪಾಯಲ್ ರವರ ಪುತ್ರ ಅನಿಶ್ ಪಿ. ಪಾಯಲ್ (16) ಎಂದು ಗುರುತಿಸಲಾಗಿದೆ. ತಂದೆ ಪ್ರಶಾಂತ್ ಪಾಯಲ್ ಮೂರು ವರ್ಷಗಳ ಹಿಂದೆ ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಆ ಬಳಿಕ ಈತ ಮಾನಸಿಕವಾಗಿ ನೊಂದುಕೊಂಡಿದ್ದ ಎನ್ನಲಾಗಿದೆ. ಇದರಿಂದಲೇ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top