ಮಂಗಳೂರು: ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 25. ನಾಪತ್ತೆಯಾಗಿದ್ದ ಬಾಲಕಿಯೋರ್ವಳ ಮೃತದೇಹವು ಮನೆ ಸಮೀಪದ ನದಿಯಲ್ಲಿ ಪತ್ತೆಯಾಗಿರುವ ಘಟನೆ ನಗರದ ಕುದ್ರೋಳಿಯಲ್ಲಿ‌ ನಡೆದಿದೆ.

ಮೃತ ಬಾಲಕಿಯನ್ನು ಕುದ್ರೋಳಿ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಎಂದು ಗುರುತಿಸಲಾಗಿದೆ. ಈಕೆ ಭಾನುವಾರದಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದು, ತಕ್ಷಣವೇ ಮನೆಮಂದಿ ಎಲ್ಲಾ ಕಡೆ ಹುಡುಕಾಡಿದರಾದರೂ ಆಕೆ ಪತ್ತೆಯಾಗಿರಲಿಲ್ಲ. ಬಳಿಕ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆಕೆ ಮನೆ ಸಮೀಪದಲ್ಲಿರುವ ನದಿ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ನದಿಯಲ್ಲಿ ಶೋಧ ನಡೆಸಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ.

Also Read  ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ...!!!

error: Content is protected !!
Scroll to Top