ಪುತ್ತೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 25. ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ವ್ಯಕ್ತಿಯೋರ್ವನಿಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56) ಎಂದು ಗುರುತಿಸಲಾಗಿದೆ. ಬಾಲಕಿಯು ಬೀಡಿ ಬ್ರಾಂಚ್ ಗೆ ತೆರಳುತ್ತಿದ್ದ ವೇಳೆ ಆರೋಪಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಈ ಕುರಿತು ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group