(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 26. ಇಲ್ಲಿನ ಶರವು ಮಹಾಗಣಪತಿ ದೇವಸ್ಥಾನದ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ಮಾರ್ಗ ಬದಲಾವಣೆ ಮಾಡಿ ಮಂಗಳೂರು ಕಮಿಷನರ್ ಶಶಿಕುಮಾರ್ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.
ಇಲ್ಲಿನ ಶರವು ಮಹಾಗಣಪತಿ ದೇವಸ್ಥಾನದ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಡಿ.23ರವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೆ.ಎಸ್. ಆರ್ ರಸ್ತೆಯಿಂದ ಪಿಎಂ ರಾವ್ ರಸ್ತೆ ಮೂಲಕ ಗಣಪತಿ ಹೈಸ್ಕೂಲ್ ಕಡೆಗೆ ಸಂಚರಿಸುವ ಎಲ್ಲಾ ತರದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಶರವು ವಿಮಲೇಶ್ ಜಂಕ್ಷನ್ ನಿಂದ ಕೆ.ಎಸ್. ರಾವ್ ಜಂಕ್ಷನ್ ವರೆಗಿನ ರಸ್ತೆಯಲ್ಲಿ ಶರವು ದೇವಸ್ಥಾನ ರಸ್ತೆಯಲ್ಲಿ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಆದುದರಿಂದ ವಾಹನಗಳು ನೇರವಾಗಿ ಹಂಪನಕಟ್ಟೆ ಜಂಕ್ಷನ್ ಮೂಲಕ ಸಂಚರಿಸಬೇಕು ಎಂದು ಕಮಿಷನರ್ ಆದೇಶಿಸಿದ್ದಾರೆ.