ಹಾಡುಹಗಲೇ ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಎಗರಿಸಿ ಪರಾರಿ

(ನ್ಯೂಸ್ ಕಡಬ) Newskadaba.com ವಿಟ್ಲ, ಅ. 27. ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ.

ಉಕ್ಕುಡ ಸಮೀಪದ ಗುಂಪಲಡ್ಕ ನಿವಾಸಿ ಕಮಲ(55) ಎಂಬವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೆಂಪು ಬಣ್ಣದ ಹೋಂಡಾ ಆಕ್ಟಿವಾ ವಾಹನದಲ್ಲಿ ಬಂದ ಅಪರಿಚಿತನೋರ್ವ ಮಹಿಳೆಯ ಕತ್ತಿನಲ್ಲಿದ್ದ 3.5 ಪವನ್ ತೂಕದ ಕರಿಮಣಿಸರ ಎಗರಿಸಿ ಪರಾರಿ ಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Also Read  2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ

error: Content is protected !!
Scroll to Top