ಮರ್ಧಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಕಡಬ, ನ.01. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಬೆಳಕಿಗೆ ಬಂದಿದೆ.







ಆತ್ಮಹತ್ಯೆ ಮಾಡಿಕೊಂಡವರನ್ನು ಐತ್ತೂರು ಗ್ರಾಮದ 72 ಕಾಲನಿ ನಿವಾಸಿ ಕೆ.ಎಫ್.ಡಿ.ಸಿ ನಿವೃತ್ತ ಉದ್ಯೋಗಿ ಪನ್ನಯ್ಯ(64) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬಂಟಿಯಾಗಿದ್ದು, ಕೆಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದರು. ಇದರಿಂದಾಗಿ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top